HomeLatest NewsBIG NEWS: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ: ಜೂನ್ 10ರಿಂದ ಹೆಚ್ಚಲಿದೆ ಮಳೆಯ ಅಬ್ಬರ

BIG NEWS: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ: ಜೂನ್ 10ರಿಂದ ಹೆಚ್ಚಲಿದೆ ಮಳೆಯ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಸಂಪೂರ್ಣ ತಗ್ಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಆರಂಭವಾಗಿದೆ. ಮುಂಗಾರು ಮಳೆ ಆರಂಭದಲ್ಲಿ ನಾಲ್ಕು ದಿನ ಆರ್ಭಟಿಸಿದ್ದ ಮಳೆರಾಯ ಇದೀಗ ತಣ್ಣಗಾಗಿದ್ದಾನೆ. ಜೂನ್ 10ರ ಬಳಿಕ ವರುಣಾರ್ಭಟ ಮತ್ತೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಣಹವೆ ಇದ್ದು, ಆಗಾಗ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ತುಮಕೂರು, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಕೊಂಚ ಮಳೆಯಾಗುವ ಸಾಧ್ಯತೆ ಇದೆ.

ಮುಂಗಾರು ಪೂರ್ವ ಮಳೆ ಬಳಿಕ ಮುಂಗಾರು ಆರಂಭವಾಗುತ್ತಿದ್ದಂತೆಯೇ ಮಳೆ ಕ್ಷೀಣಿಸಿದೆ. ಜೂನ್ 10ರ ಬಳಿಕ ಮಳೆ ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular