ಬೆಂಗಳೂರು: ನವೆಂಬರ್ 1ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವರನ್ನು ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. 2026ರ ಕನ್ನಡ ರಾಜ್ಯೋತ್ಸವದಂದು ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಚಿವರು ಅನಾರೋಗ್ಯ ಅಥವಾ ಇತರ ಕಾರಣಗಳಿಂದ ಕಾರ್ಯಕ್ರಮಕ್ಕೆ ಗೈರಾದರೆ, ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಕ್ಟೋಬರ್ 27ರಂದು ಹೊರಡಿಸಿರುವ ಆದೇಶದಲ್ಲಿ ಜಿಲ್ಲಾವಾರು ಸಚಿವರ ಹೆಸರು ಹಾಗೂ ಅವರಿಗೆ ವಹಿಸಿರುವ ಜವಾಬ್ದಾರಿಗಳ ವಿವರಗಳನ್ನು ನೀಡಲಾಗಿದೆ. ಹಾಗಾದರೆ ನಿಮ್ಮ ಜಿಲ್ಲೆಯಲ್ಲಿ ಈ ಬಾರಿ ಯಾರು ಧ್ವಜಾರೋಹಣ ಮಾಡಲಿದ್ದಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ
ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವದಂದು ಜಿಲ್ಲಾವಾರು ಧ್ವಜಾರೋಹಣ ನೆರವೇರಿಸಲಿರುವ ಸಚಿವರ ಪಟ್ಟಿ ಇಲ್ಲಿದೆ.
-
ತುಮಕೂರು: ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
-
ಚಿಕ್ಕಮಗಳೂರು: ಕೆ.ಜೆ. ಜಾರ್ಜ್ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಬೆಂಗಳೂರು ಗ್ರಾಮಾಂತರ: ಎಚ್.ಸಿ. ಮಹದೇವಪ್ಪ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಕೋಲಾರ: ಕೆ.ಎಚ್. ಮುನಿಯಪ್ಪ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ವಿಜಯಪುರ: ಎಂ.ಬಿ. ಪಾಟೀಲ್ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಬೆಳಗಾವಿ: ಸತೀಶ್ ಜಾರಕಿಹೊಳಿ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ದಕ್ಷಿಣ ಕನ್ನಡ: ಯು.ಟಿ. ಖಾದರ್ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಕಲಬುರಗಿ: ಪ್ರಿಯಾಂಕ್ ಖರ್ಗೆ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಬೀದರ್: ಈಶ್ವರ್ ಖಂಡ್ರೆ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಯಾದಗಿರಿ: ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಗದಗ: ಬಸವರಾಜ್ ರಾಯರೆಡ್ಡಿ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಮಂಡ್ಯ: ಎನ್. ಚಲುವರಾಯಸ್ವಾಮಿ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಚಿಕ್ಕಬಳ್ಳಾಪುರ: ಸುರೇಶ್ ಬಿ.ಎಸ್. ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಮೈಸೂರು: ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಧಾರವಾಡ: ಸಂತೋಷ್ ಎಸ್. ಲಾಡ್ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಕೊಪ್ಪಳ: ತಂಗಡಗಿ ಶಿವರಾಜ್ ಸಂಗಪ್ಪ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ದಾವಣಗೆರೆ: ಎಸ್.ಎಸ್. ಮಲ್ಲಿಕಾರ್ಜುನ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಚಾಮರಾಜನಗರ: ಸಿ. ಪುಟ್ಟರಂಗಶೆಟ್ಟಿ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಶಿವಮೊಗ್ಗ: ಮಧು ಬಂಗಾರಪ್ಪ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಹಾವೇರಿ: ರುದ್ರಪ್ಪ ಮಾನಪ್ಪ ಲಮಾಣಿ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಬಳ್ಳಾರಿ: ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಉತ್ತರ ಕನ್ನಡ: ಲಕ್ಷ್ಮಣ ಸಂಗಪ್ಪ ಸವದಿ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಕೊಡಗು: ಪಿ.ಎಂ. ನರೇಂದ್ರಸ್ವಾಮಿ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಹಾಸನ: ಕೆ.ಎಂ. ಶಿವಲಿಂಗೇಗೌಡ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಬಾಗಲಕೋಟೆ: ವಿಜಯಾನಂದ್ ಕಾಶಪ್ಪನವರ್ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಬೆಂಗಳೂರು ದಕ್ಷಿಣ: ಹೆಚ್.ಸಿ. ಬಾಲಕೃಷ್ಣ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ರಾಯಚೂರು: ಅಜಯ್ ಸಿಂಗ್ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಉಡುಪಿ: ರಿಜ್ವಾನ್ ಅರ್ಷದ್ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ಚಿತ್ರದುರ್ಗ: ಟಿ. ರಘುಮೂರ್ತಿ ಅವರು ಧ್ವಜಾರೋಹಣ ಮಾಡಲಿದ್ದಾರೆ.
-
ವಿಜಯನಗರ: ಕೆ.ಎಸ್. ಬಸವಂತಪ್ಪ ಅವರು ಧ್ವಜಾರೋಹಣ ಮಾಡಲಿದ್ದಾರೆ.

