HomeLatest NewsBIG NEWS: ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ: ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

BIG NEWS: ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ: ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಆರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಉಡುಪಿ, ಕೊಡಗು, ಚಿಕ್ಕಮಗಳೂರು, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ ಮುಂದುವರೆದಿರುವುದರಿಂದ ಜಿಲ್ಲಾಡಳಿತ ಇಂದು ಕೂಡ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಇನ್ನು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular