HomeKarnatakaಕೇಂದ್ರದಿಂದ ಕರ್ನಾಟಕಕ್ಕೆ 186 ಕೋಟಿ ರೂ ಬಾಕಿ, ಕೋರ್ಟ್ ಮೊರೆ ಹೋಗಲು ಈಶ್ವರ ಖಂಡ್ರೆ ತೀರ್ಮಾನ

ಕೇಂದ್ರದಿಂದ ಕರ್ನಾಟಕಕ್ಕೆ 186 ಕೋಟಿ ರೂ ಬಾಕಿ, ಕೋರ್ಟ್ ಮೊರೆ ಹೋಗಲು ಈಶ್ವರ ಖಂಡ್ರೆ ತೀರ್ಮಾನ

ಬೆಂಗಳೂರು-15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮಪಂಚಾಯತಿಗಳಿಗೆ ಬರಬೇಕಾದ 2186.20 ಕೋಟಿ ರೂ. ಅನುದಾನ ತಡೆಹಿಡಿದಿರುವ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ತೀರ್ಮಾನಿಸಲಾಗಿದೆ.

ಇಂದು ತಮ್ಮ ಕಚೇರಿಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಅಧಿಕಾರಿಗಳೊಂದಿಗೆ ಈ ಸಂಬ್ಧ ಸಭೆ ನಡೆಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಿದ್ದ 2186.20 ಕೋಟಿ ರೂ. ಬಿಡುಗಡೆ ಮಾಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಬರಪರಿಸ್ಥಿತಿ ತಲೆದೋರಿದ್ದು, 710 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. 149 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 561 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಬಿತ್ತನೆ ಮಾಡಿದ ಬೀಜ ಮೊಳಕೆ ಒಡೆಯದೆ ರೈತರು ಕಂಗಾಲಾಗಿರುವ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಈ ರೀತಿ ನ್ಯಾಯಯುತ ಹಂಚಿಕೆಯನ್ನೇ ಬಿಡುಗಡೆ ಮಾಡದಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಕಾನೂನು ಅಂಶಗಳ ಬಗ್ಗೆ ಚರ್ಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮಪಂಚಾಯತಿ ಚುನಾವಣೆಗೆ ಸಿದ್ಧತೆ

ಗ್ರಾಮಪಂಚಾಯತಿ ಚುನಾವಣೆಗೆ ಸಿದ್ಧತೆ:

ರಾಜ್ಯ ಸರ್ಕಾರ ಅವಧಿ ಮುಗಿದ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಎಸ್.ಐ.ಆರ್.ಕಾರ್ಯಕ್ಕೆ ಸರ್ಕಾರಿ ಸಿಬ್ಬಂದಿ ನಿಯೋಜನೆ ಆಗಿದ್ದ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಗ್ರಾ.ಪಂ. ಚುನಾವಣೆಗೆ ಸರ್ಕಾರ ಸಂಪೂರ್ಣ ಸಜ್ಜಾಗಿದ್ದು, ಶೀಘ್ರವೇ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಹಾಗೂ ಪಂಚಾಯತಿ ರಾಜ್ ಇಲಾಖೆ ಕಾರ್ಯದರ್ಶಿ ಡಿ.ರಂದೀಪ್ ಅವರೊಂದಿಗೆ ಚುನಾವಣೆ ನಡೆಸುವ ಕುರಿತ ಕಾನೂನು ಅಂಶಗಳ ಬಗ್ಗೆ ಮಾಹಿತಿ ಪಡೆದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular