HomeLatest Newsಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2025-26 ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯ ಪಡೆಯಲು ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 03 ಕೊನೆಯ ದಿನ ಆಗಿರುತ್ತದೆ (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).

*ಅರ್ಹತೆ:*

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ಉಪ್ಪಾರ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.

ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನದ ಮಿತಿ ರೂ.3.50 ಲಕ್ಷ. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ 21 ವರ್ಷಗಳಿಂದ 45 ವರ್ಷಗಳ ಮಿತಿಯಲ್ಲಿರಬೇಕು.

ವಿದೇಶಿ ವ್ಯಾಸಂಗ ಸಾಲ ಯೋಜನೆಯಡಿ ವಾರ್ಷಿಕ ವರಮಾನವು ರೂ.15 ಲಕ್ಷ ಮಿತಿಯಲ್ಲಿ ಇರಬೇಕು. ವಯೋಮಿತಿ: ವಿದ್ಯಾರ್ಥಿಯ ವಯಸ್ಸು 25 (ಸ್ನಾತಕೋತ್ತರ ಪದವೀಧರರಿಗೆ) ಮತ್ತು ಪಿ.ಎಚ್.ಡಿ. ಪದವೀಧವಿದರರಿಗೆ 27 ವರ್ಷಗಳ ವಯೋಮಿತಿ ನಿಗಧಿಪಡಿಸಲಾಗಿದೆ.) ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಶಾತೆಗೆ ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33 ರಷ್ಟು, ವಿಕಲಚೇತನರಿಗೆ ಶೇ.5 ರಷ್ಟು, ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇದೆ.

*ನಿಗಮದ ಯೋಜನೆಗಳು:*

ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ ಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ) ಮತ್ತು (ನವೀಕರಣ), ವಿದೇಶಿ ವ್ಯಾಸಂಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ (ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು),

ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಲ್ಲಿನ ಹೆಸರು, ವಿಳಾಸ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿನ ಹೆಸರು ಕಡ್ಡಾಯವಾಗಿ ತಾಳೆಯಾಗಬೇಕು.

ಅರ್ಜಿಗಳನ್ನು ಬೆಂಗಳೂರು -ಒನ್/ ಕರ್ನಾಟಕ-ಒನ್/ ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಸಲ್ಲಿಸಬಹುದು.

ವಿಶೇಷ ಸೂಚನೆ: 2023-24 ಮತ್ತು 2024-25ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಅರ್ಜಿದಾರರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅಂತಹ ಅರ್ಜಿದಾರರನ್ನು ಪ್ರಸ್ತುತ ಸಾಲಿಗೂ ಸಹ ಪರಿಗಣಿಸಲಾಗುವುದು. 2023-24 ಮತ್ತು 2024-25ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿರುವ ಯೋಜನೆಯನ್ನು ಹೊರತುಪಡಿಸಿ ಉಳಿದ ಯೋಜನೆಗಳಿಗೆ ಪ್ರಸ್ತುತ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ ಬ್ಲಾಕ್ ನ ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ ಅಥವಾ ಸಹಾಯವಾಣಿ ಸಂಖ್ಯೆ: 08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

————

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular