ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2025-26ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿ.20 ಕೊನೆಯ ದಿನವಾಗಿದೆ.ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಆರ್ಹರಾಗಿರುತ್ತಾರೆ.

ಶಿಷ್ಯ ವೇತನ ಅರ್ಜಿಯನ್ನು ಅಂತರ್ಜಾಲತಾಣ https://sangeetanrityaacademy.karnataka.gov.in ಮೂಲಕ ಪಡೆದು ಸಲ್ಲಿಸಬಹುದು. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಹೆಸರಿನ ಫೇಸ್ಬುಕ್ ಪುಟದಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿದೆ. ಅರ್ಜಿಯನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.

ಸಂದರ್ಶನದ ಬದಲಿಗೆ ಅಭ್ಯರ್ಥಿಯು ಇನ್ನು ಮುಂದೆ ಅರ್ಜಿಯಲ್ಲಿ ನೀಡಿರುವ ಪಠ್ಯಕ್ರಮವನ್ನು ಮೊಬೈಲ್, ವಿಡಿಯೋ ಚಿತ್ರೀಕರಿಸಿ ಪೆನ್ಡ್ರೈವ್ನಲ್ಲಿ ಅಳವಡಿಸಿ, ಪೆನ್ಡ್ರೈವ್ನೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560002 ಕಾರ್ಯಾಲಯಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು. ಬಂದ ಅರ್ಜಿಗಳನ್ನು ಆಯಾ ಕಲಾ ಪ್ರಕಾರಕ, ಅನುಗುಣವಾಗಿ ತೀರ್ಪುಗಾರರು, ಅಭ್ಯರ್ಥಿಗಳು ಚಿತ್ರೀಕರಿಸಿ ಕಳುಹಿಸಿಕೊಟ್ಟಿರುವ ಪೆನ್ಡ್ರೈವ್ ಅನ್ನು ಪರಿಶೀಲಿಸಿ ಶಿಷ್ಯವೇತನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪಠ್ಯಕ್ರಮ ಚಿತ್ರೀಕರಿಸಿದ ಪೆನ್ಡ್ರೈವ್ನೊಂದಿಗೆ ಅರ್ಜಿಯನ್ನು ಸ್ವೀಕರಿಸಲು ಡಿ.20 ಕೊನೆಯ ದಿನ. ತೀರ್ಪುಗಾರರ ತೀರ್ಮಾನವೇ ಅಂತಿಮ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನರೇಂದ್ರ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read