ಶಿವಮೊಗ್ಗ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ವಿಷಯಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ ಜನವರಿ – 2023 ರಿಂದ ಡಿಸೆಂಬರ್ 2025ರೊಳಗೆ ಪ್ರಕಟವಾಗುವ ಪುಸ್ತಕಗಳ ಲೇಖಕರಿಂದ “ಶ್ರೇಷ್ಠ ಪುಸ್ತಕ ಪ್ರಶಸ್ತಿ” ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ದಿ: 05/01/2026ರೊಳಗಾಗಿ ಅಕಾಡೆಮಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಮತ್ತು ಮಾರ್ಗಸೂಚಿಗಳನ್ನು ಅಕಾಡೆಮಿಯ ಜಾಲತಾಣ https://kstacademy.in ದಲ್ಲಿ ಪಡೆಯಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.