HomeLatest NewsBREAKING : ಕರ್ನಾಟಕ 'ದ್ವಿತೀಯ PUC' ಪರೀಕ್ಷೆ-2 ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ...

BREAKING : ಕರ್ನಾಟಕ ‘ದ್ವಿತೀಯ PUC’ ಪರೀಕ್ಷೆ-2 ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | II PUC Exam Result 2025

ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಇಂದು ಪ್ರಕಟವಾಗಿದೆ.
2024-25 ನೇ ಸಾಲಿನ ದ್ವಿತೀಯ ಪಿ.ಯುಸಿ-2. ಫಲಿತಾಂಶವು ಇಂದು ಪ್ರಕಟವಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಜಾಲತಾಣ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ದ್ವಿತೀಯ ಪಿಯುಸಿ ಪರೀಕ್ಷೆ-೨ ರಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ನನ್ನ ತುಂಬು ಹೃದಯದ ಅಭಿನಂದನೆಗಳು! ಅಪೂರ್ಣ ಫಲಿತಾಂಶ ಬಂದಲ್ಲಿ, ನೀವು ಧೃತಿಗೆಡಬೇಡಿ. ಪರೀಕ್ಷೆ-೩ ಕ್ಕೆ ಯಾವುದೇ ಶುಲ್ಕವಿಲ್ಲದೆ ನೋಂದಾಯಿಸಿಕೊಳ್ಳಬಹುದು. ನಿಮ್ಮ ಪ್ರಯತ್ನವನ್ನು ಮುಂದುವರಿಸಿ, ಖಂಡಿತವಾಗಿಯೂ ಯಶಸ್ಸು ನಿಮ್ಮದಾಗುತ್ತದೆ. ಪರೀಕ್ಷೆ-೩ ರ ಸದುಪಯೋಗ ಪಡೆದುಕೊಳ್ಳಿ. ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 24-04-2025ರಿಂದ ದಿನಾಂಕ 08-05-2025ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ 3ನೇ ಪರೀಕ್ಷೆಯನ್ನು ದಿನಾಂಕ 09-06-2025ರಿಂದ 20-06-2025ರವರೆಗೆ ನಡೆಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular