ರೋಗಿಯ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ಪಟ್ಟಣದಲ್ಲಿ ವಯಸ್ಸಾದ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಪುರುಷ ಹೋಮ್ ನರ್ಸ್ ನನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬಂಧಿತ ಪುರುಷ ನರ್ಸ್ ಗದಗ ಮೂಲದ 19 ವರ್ಷದ ಶಿವಾನಂದ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಯನ್ನು ಕೊಡಂಗಲ್ಲು ಬಳಿಯ ಹುಡ್ಕೋ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಅನಾರೋಗ್ಯದ ವೃದ್ಧರನ್ನು ನೋಡಿಕೊಳ್ಳಲು ನೇಮಿಸಲಾಗಿತ್ತು.

ಆದಾಗ್ಯೂ, ವೃದ್ಧ ಪದೇ ಪದೇ ಅನಾರೋಗ್ಯಕ್ಕೆ ಮತ್ತು ಖಿನ್ನತೆಗೆ ಒಳಗಾಗಿದ್ದರು. ಆರೋಪಿ ಪುರುಷ ನರ್ಸ್‌ಗೆ ಗೊತ್ತಾಗದಂತೆ ಕುಟುಂಬಸ್ಥರು ಅನುಮಾನಗೊಂಡು ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ.

ಆರೋಪಿ ಪುರುಷ ನರ್ಸ್ ವೃದ್ಧ ರೋಗಿಯನ್ನು ಅಸ್ವಾಭಾವಿಕ ಲೈಂಗಿಕತೆಗೆ ಬಲವಂತ ಮಾಡಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಆರೋಪಿಯು ತನ್ನ ಬೇಡಿಕೆಗಳನ್ನು ಒಪ್ಪಿಕೊಳ್ಳಲು ರೋಗಿಯನ್ನು ಥಳಿಸಿರುವುದು ಗೊತ್ತಾಗಿದೆ. ಈ ಸಂಬಂಧ ಮೂಡುಬಿದರೆ ಪೊಲೀಸರಿಗೆ ಕುಟುಂಬದವರು ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read