HomeKarnatakaಕರ್ನಾಟಕ ರಾಜ್ಯ 'ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ‘ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ.

ಅದರಂತೆ 2026ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಗಳು 2026 ರ ಎಸ್‍ಎಸ್‍ಎಲ್‍ಸಿ/ಪಿಯುಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. https://powermedia.info ಲಿಂಕ್ ಮುಖಾಂತರ ಅರ್ಜಿ ಸಲ್ಲಿಸುವುದು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾನಿಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ವಿದ್ಯಾರ್ಥಿಯ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಶಾಲಾ ಕಾಲೇಜಿನ ದೃಢೀಕೃತ ಅಂಕಪಟ್ಟಿ, ಸಂಘವು ನೀಡಿರುವ ನಮೂನೆಯಲ್ಲಿ ಕಚೇರಿ ಮುಖ್ಯಸ್ಥರ ದೃಢೀಕರಣ ಮತ್ತು ಶಾಖಾ ಸಂಘದ ದೃಢೀಕರಣ ಪತ್ರವನ್ನು ಅಪ್‍ಲೋಡ್ ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಆನ್‍ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡತಕ್ಕದ್ದು. ಅರ್ಜಿ ಸಲ್ಲಿಸಲು ಮೇ, 25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರಾಜ್ಯ ಸಂಘದ ದೂ.ಸಂ.080-22354783/84 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಗಿರಿಗೌಡ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular