HomeLatest Newsಕರ್ನಾಟಕ ರಾಜ್ಯ 'ಕಾಡುಗೊಲ್ಲ ಅಭಿವೃದ್ಧಿ ನಿಗಮ'ದಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ‘ಕಾಡುಗೊಲ್ಲ ಅಭಿವೃದ್ಧಿ ನಿಗಮ’ದಿಂದ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜುಲೈ, 02 ಕೊನೆಯ ದಿನವಾಗಿದೆ(ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ). ವಿದೇಶಿ ವ್ಯಾಸಂಗ ಯೋಜನೆಯಡಿ ವಾರ್ಷಿಕ ವರಮಾನವು ರೂ.15 ಲಕ್ಷಗಳ ಮಿತಿಯಲ್ಲಿರಬೇಕು.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. 1.20 ಲಕ್ಷಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ /ಶ್ರೀಮತಿ /ಕುಮಾರಿ ಮುಂತಾದ ಮಾಹಿತಿಗಳು)

ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಡಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080-22374848/7899899039ಯಿಂದ ಪಡೆಯಬಹುದಾಗಿದೆ. ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿ ದೂ.ಸಂ. 08272-221656 ನ್ನು ಖುದ್ದಾಗಿ ಸಂಪರ್ಕಿಸಬಹುದು. “2023-24 ಹಾಗೂ 2024-25ನೇ ಸಾಲಿನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ”. ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜುಲೈ, 02 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular