HomeKarnatakaಕರ್ನಾಟಕ ರಾಜ್ಯ ಮುಕ್ತ ವಿವಿ : ಪದವಿ, ಸ್ನಾತಕೋತ್ತರ ಪ್ರವೇಶಾತಿ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಮುಕ್ತ ವಿವಿ : ಪದವಿ, ಸ್ನಾತಕೋತ್ತರ ಪ್ರವೇಶಾತಿ ಅವಧಿ ವಿಸ್ತರಣೆ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24 ನೇ ಜುಲೈ ಆವೃತ್ತಿ ಪ್ರವೇಶಾತಿಯನ್ನು ಸೆಪ್ಟೆಂಬರ್, 30 ರವರೆಗೆ ವಿಸ್ತರಿಸಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.

ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2023ರ ಸೆಪ್ಟೆಂಬರ್, 30 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರಾಮುವಿ ಪ್ರಾದೇಶಿಕ ಕೇಂದ್ರ, ಮಡಿಕೇರಿ ಕಚೇರಿಯನ್ನು ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮಡಿಕೇರಿ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ಗಳಾದ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಲಿಬ್, ಐಎಸ್ಸಿ, ಬಿಎಸ್ಸಿ, ಎಂ.ಲಿಬ್ ಐಎಸ್ಸಿ(ಜನರಲ್, ಐಟಿ), ಬಿಎಸ್ಡಬ್ಲ್ಯು, ಎಂಎ, ಎಂಸಿಜೆ, ಎಂಕಾಂ, ಎಂಎಸ್ಸಿ, ಎಂ.ಲಿಬ್ ಐಎಸ್ಸಿ(ಎಂಬಿಎ, ಎಂಸಿಎ(ಎಐಸಿಟಿಡ ಅಪ್ರೋವ್ಡ್) ಎಂಎಸ್ಡಬ್ಲ್ಯು ಮತ್ತು ಪಿ.ಜಿ.ಸರ್ಟಿಫಿಕೇಟ್, ಡಿಪ್ಲೋಮ ಸರ್ಟಿಫಿಕೇಟ್ ಪ್ರೋಗ್ರಾಮ್ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಎಸ್ಬಿಯು ಯುಜಿಸಿ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ನಿಂದ ‘ಎ ಪ್ಲಸ್’ ಮಾನ್ಯತೆ ಪಡೆದಿದೆ. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳಿಗೆ ಸಮನಾದ ಅರ್ಹತೆ ಇರುತ್ತದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ ಸ್ಮಿತಾ ಸುಬ್ಬಯ್ಯ ಪ್ರಾದೇಶಿಕ ನಿರ್ದೇಶಕರು, ಕರಾಮುವಿ., ಮಡಿಕೇರಿ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಟ್ಟಡ ಮಡಿಕೇರಿ-571201 ದೂ.ಸಂ.08272201147, 8073342310, 7618763654, 9141938803, 8296215714, 9611320191 ನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular