HomeLatest News'ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ'ದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

‘ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ’ದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಯೋಜನೆಗಳಾದ ಧನಶ್ರೀ, ಚೇತನಾ, ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಿಗೆ ಸೇವಾ ಸಿಂಧೂ ಪೋರ್ಟಲ್‍ನಲ್ಲಿ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಓನ್, ಬೆಂಗಳೂರು ಓನ್, ಕರ್ನಾಟಕ ಓನ್ ಕೇಂದ್ರಗಳಲ್ಲಿ ಡಿಸೆಂಬರ್ 15, 2025 ರೊಳಗೆ ಅರ್ಜಿ ಸಲ್ಲಿಸಬೇಕು. ಹಾಗೂ (ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ಧನಶ್ರೀ) ಈ ಎರಡು ಯೋಜನೆಯಡಿ ಅರ್ಜಿ ಸಲ್ಲಿಸುವರು ಆನ್‍ಲೈನ್ ಹಾಗೂ ಆಫ್‍ಲೈನ್‍ದಲ್ಲಿ ಅರ್ಜಿ ಹಾಕಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಧಾರವಾಡ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಜಿಲ್ಲಾ ಅಭಿವೃದ್ದಿ ನೀರಿಕ್ಷರ ಕಚೇರಿಗೆ ಅಥವಾ ದೂರವಾಣಿ ಸಂಖ್ಯೆ:0836-2447850 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular