HomeJobsBREAKING: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 15 ಸಾವಿರ ಶಿಕ್ಷಕರ ಹುದ್ದೆಗೆ ಆ. 18...

BREAKING: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 15 ಸಾವಿರ ಶಿಕ್ಷಕರ ಹುದ್ದೆಗೆ ಆ. 18 ರಿಂದ ಅರ್ಜಿ ಸಲ್ಲಿಕೆ ಆರಂಭ

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. 15 ಸಾವಿರ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಚಾಲನೆ ಸಿಕ್ಕಿದ್ದು, ಆ. 18 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ ನಾನು ಮಾತನಾಡಿದಾಗೆಲ್ಲಾ, ಶಿಕ್ಷಕರ ನೇಮಕ ಯಾವಾಗ ಎಂದು ಎಲ್ಲರೂ ನನ್ನನ್ನು ಕೇಳುತ್ತಿದ್ದರು. ಆದರೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಉದ್ದೇಶ ಹೊಂದಿದ್ದ ನಮ್ಮ ಸರ್ಕಾರ, ಶಿಕ್ಷಕರ ನೇಮಕದಲ್ಲಿಯೂ ಕೆಲ ಮಾರ್ಪಾಡು ಮಾಡಲು ನಿರ್ಧರಿಸಿತ್ತು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

 ಅಲ್ಲದೇ ಒಳ ಮೀಸಲಾತಿ ಜಾರಿ, ನ್ಯಾಯಾಲಯದ ತಡೆಯಾಜ್ಞೆ ಮತ್ತಿತರ ಕಾರಣಕ್ಕೆ ನೇಮಕ ಪ್ರಕ್ರಿಯೆ ಆರಂಭಿಸುವುದು ತಡವಾಗಿತ್ತು. ಆದರೆ ಈಗ ನೇಮಕ ಪ್ರಕ್ರಿಯೆಯನ್ನು ನಾವು ಆರಂಭಿಸಿದ್ದೇವೆ. ನಾನು ಈ ಹಿಂದೆ  ಹೇಳುತ್ತಿದ್ದಂತೆಯೇ 15 ಸಾವಿರ ಶಿಕ್ಷಕರ ನೇಮಕಕ್ಕೆ ಚಾಲನೆ ನೀಡಲಾಗಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 6,967 ಹುದ್ದೆಗಳು ಮೀಸಲಾಗಿವೆ. 8,033 ಹುದ್ದೆಗಳು ಉಳಿಕೆ ಮೂಲ ವೃಂದದ ಹುದ್ದೆಗಳಾಗಿವೆ. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು, ಗಣಕ ವಿಜ್ಞಾನ ಶಿಕ್ಷಕರನ್ನು, ದೈಹಿಕ ಶಿಕ್ಷಣ ಶಿಕ್ಷಕರನ್ನು (ಗ್ರೇಡ್‌I ಮತ್ತು ಗ್ರೇಡ್‌II), ಪ್ರೌಢ ಶಾಲಾ ಸಹ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೈಕ್ಷಣಿಕ ಜಿಲ್ಲಾವಾರು ಖಾಲಿ ಇರುವ ಹುದ್ದೆಗಳಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿ, ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ. ದಿನಾಂಕ 18-08-2026 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಈಗಾಗಲೇ ಅಧಿಸೂಚನೆಯನ್ನು ಸರ್ಕಾರ ಇ-ರಾಜ್ಯಪತ್ರ ವೆಬ್‌ಸೈಟ್‌ನಲ್ಲಿ(www.erajyapatra.karnataka.gov.in)  ಅಧಿಕೃತವಾಗಿ ಪ್ರಕಟಿಸಿದ್ದೇವೆ.

ನಿಮ್ಮ ಜಿಲ್ಲೆಯಲ್ಲಿ ಯಾವೆಲ್ಲಾ ಶಿಕ್ಷಕರ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ, ಎಷ್ಟು ಹುದ್ದೆಗಳಿವೆ, ಮೀಸಲಾತಿ ಹಂಚಿಕೆ, ನೇಮಕದಲ್ಲಿ ಆಗಿರುವ ಬದಲಾವಣೆಗಳೇನೇನು ಎಂಬೆಲ್ಲಾ ಮಾಹಿತಿಯನ್ನು ನೀವು ಈ ಅಧಿಸೂಚನೆಗಳಿಂದ ಪಡೆದುಕೊಳ್ಳಬಹುದು. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್‌ ಸೈಟ್‌:  https://schooleducation.kar.nic.in

ಪಾರದರ್ಶಕವಾಗಿ ಮತ್ತು ಯಾವುದೇ ಗೊಂದಲವಿಲ್ಲದಂತೆ ಈ ನೇಮಕ ಪ್ರಕ್ರಿಯೆ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಯನ್ನು ನೀಡಿದ್ದೇನೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುಲು ನಮ್ಮ ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ ಎಂದು ಸಚಿವರು ತಿಳಿಸಿದ್ದಾರೆ.

https://www.facebook.com/share/p/18HxAgggGt/

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular