ಲೈಂಗಿಕ ಕಿರುಕುಳಕ್ಕೊಳಗಾದ ಹುಡುಗಿ ಗರ್ಭಿಣಿ ಎಂದು ತಿಳಿದು ಆತ್ಮಹತ್ಯೆ

ಮಂಡ್ಯ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹದಿಹರೆಯದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

15 ವರ್ಷದ ಬಾಲಕಿ ತಾನು ಗರ್ಭಿಣಿ ಎಂದು ತಿಳಿದ ನಂತರ ಜನವರಿ 24 ರಂದು ತನ್ನ ಜೀವ ಕಳೆದುಕೊಂಡಿದ್ದಾಳೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕಿರುಕುಳದ ಆರೋಪದ ಮೇಲೆ ಬಾಲಕಿ ದೂರು ನೀಡಿದ್ದಳು. ಆದರೆ, ಲೈಂಗಿಕ ದೌರ್ಜನ್ಯದ ಬಗ್ಗೆ ಆಕೆ ಪೊಲೀಸರ ಮುಂದೆ ಬಹಿರಂಗಪಡಿಸಿರಲಿಲ್ಲ. ನೆರೆಮನೆಯವನಾದ ಆರೋಪಿ ಸದ್ಯ ತಲೆಮರೆಸಿಕೊಂಡಿದ್ದಾನೆ.

ಬಾಲಕಿಯ ಕುಟುಂಬದ ಪ್ರಕಾರ, ಅತ್ಯಾಚಾರದ ನಂತರ ಅವಳು ಗರ್ಭಿಣಿ ಎಂದು ತಿಳಿದಾಗಿನಿಂದ ಖಿನ್ನತೆಗೆ ಒಳಗಾಗಿದ್ದಳು. ಜನವರಿ 24 ರಂದು ಆಕೆ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಮಾತನಾಡಿ, ಪೊಲೀಸರು ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸುತ್ತಿದ್ದಾರೆ.

ತನ್ನ ಮೇಲೆ ಅತ್ಯಾಚಾರ ನಡೆದಿರುವುದನ್ನು ಬಾಲಕಿ ಪೊಲೀಸರಿಗೆ ಹೇಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ಕಿರುಕುಳದ ಆರೋಪ ಮಾಡಿದ್ದರು. ನಂತರ ಪೊಲೀಸರು ಪೋಕ್ಸೊ(ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಆ ಸಮಯದಲ್ಲೂ ಆಕೆ ಲೈಂಗಿಕ ದೌರ್ಜನ್ಯದ ಬಗ್ಗೆ ಬಹಿರಂಗಪಡಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯ ನೆರೆ ಮನೆಯ ಆರೋಪಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಸದ್ಯ ಪರಾರಿಯಾಗಿರುವ ಆರೋಪಿ ಆಕೆಯ ಮನೆಯವರಿಗೂ ಗೊತ್ತಿದೆ. ಮಂಡ್ಯ ಎಸ್ಪಿ ನೀಡಿದ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read