HomeKarnatakaBREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET...

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಬೆಂಗಳೂರು :   ಕರ್ನಾಟಕ ಪರೀಕ್ಷಾ ಪ್ರಾಧಿಕಾರವು UGCET-2026 ಪರೀಕ್ಷೆಯ ಫಲಿತಾಂಶವನ್ನು ಜೂನ್ 6, 2026 (ಶನಿವಾರ) ರಂದು ನಾಳೆ   ಪ್ರಕಟಿಸಲಿದೆ.

ವೈದ್ಯಕೀಯ ಶಿಕ್ಷಣ ಸಚಿವರು ಮತ್ತು KEA ಸಹ ಅಧ್ಯಕ್ಷರಾದ ಡಾ. ಶರಣ ಪ್ರಕಾಶ ಪಾಟೀಲ ಅವರು ಅಂದು ಮಧ್ಯಾಹ್ನ 12:00 ಗಂಟೆಗೆ ಪತ್ರಿಕಾಗೋಷ್ಠಿಯನ್ನು ನಡೆಸಿ ಫಲಿತಾಂಶದ ವಿವರಗಳನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಅಂದು ಮಧ್ಯಾಹ್ನ 2:00 ಗಂಟೆಯ ನಂತರ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಫಲಿತಾಂಶವನ್ನು ವೀಕ್ಷಿಸುವುದು ಹೇಗೆ?

ಫಲಿತಾಂಶ ಪ್ರಕಟವಾದ ನಂತರ, ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿ (Scorecard) ಪಡೆಯಬಹುದು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  1. cetonline.karnataka.gov.in
  2. karresults.nic.in

ಸೂಚನೆ: ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಅರ್ಜಿ ಸಂಖ್ಯೆ (Application Number) ಮತ್ತು ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು (First 4 characters of your name) ಸಿದ್ಧವಾಗಿಟ್ಟುಕೊಳ್ಳಿ.ಹೆಚ್ಚಿನ ದಟ್ಟಣೆ (Traffic) ಇರುವುದರಿಂದ ವೆಬ್‌ಸೈಟ್ ನಿಧಾನವಾಗಬಹುದು, ಆತಂಕಪಡದೆ ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ. ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿ ಎಂದು ಹಾರೈಸುತ್ತೇವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular