HomeKarnatakaBREAKING: ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಅವಿರೋಧ ಆಯ್ಕೆ

BREAKING: ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭಾ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್.ಪಾಟೀಲ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ಸ್ಪೀಕರ್ ಆಯ್ಕೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹಂಗಾಮಿ ಸ್ಪೀಕರ್ ಟಿ.ಬಿ.ಜಯಚಂದ್ರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸೂಚಿಸಿದರು. ಸ್ಪೀಕರ್ ಸ್ಥಾನಕ್ಕೆ ಸಿಎಂ ಡಿ.ಕೆ.ಶಿವಕುಮಾರ್, ಜಿ.ಎಸ್.ಪಾಟೀಲ್ ಹೆಸರಿ ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಸ್ಪೀಕರ್ ಆಯ್ಕೆ ಚುನಾವಣಾ ಪ್ರಕ್ರಿಯೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಬಹಿಷ್ಕರಿಸಿ ಸದನದಿಂದ ಹೊರ ನಡೆದರು. ಬಸವರಾಜ್ ಹೊರಟ್ಟಿಯವರನ್ನು ಅಸಂವಿಧಾನಿಕವಾಗಿ ಸಭಾಪತಿ ಹುದ್ದೆಯಿಂದ ಕೆಳಗಿಳಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಸ್ಪೀಕರ್ ಆಯ್ಕೆ ಚುನಾವಣೆಯಲ್ಲಿ ಭಾಗಿಯಾಗಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ಸದಸುಅರು ತಿಳಿಸಿದ್ದಾರೆ. ಸದನದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭಾ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದರು. ಈ ವೇಳೆ ಡಿಸಿಎಂ ಪರಮೇಶ್ವರ್ ನೂತನ ಸ್ಪೀಕರ್ ಜಿ.ಎಸ್.ಪಾಟೀಲ್ ಹೆಸರು ಅನುಮೋದಿಸಿದರು.

ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಆಯ್ಕೆ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸ್ಪೀಕರ್ ಯು,ಟಿ.ಖಾದರ್ ಸೇರಿದಂತೆ ಹಲವು ನಾಯಕರು ಜಿ.ಎಸ್.ಪಾಟೀಲ್ ಅವರಿಗೆ ಅಭಿನಂದಿಸಿ ಸ್ಪೀಕರ್ ಪೀಠಕ್ಕೆ ಕರೆತಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular