HomeLatest Newsಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಆನ್‌ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-3ಎ ನಲ್ಲಿ ಕ್ರಮ ಸಂಖ್ಯೆ 1 ರ (ಎ) ಯಿಂದ (ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ/ಉತ್ತಮಕೊಳಗ ಸಮುದಾಯಕ್ಕೆ ಸೇರಿದ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಆಹಾರವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕುಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ.ನಿಗಮದಿಂದ ವಾಹನ ಖರೀದಿಗೆ ರೂ.03 ಲಕ್ಷಗಳ ಸಹಾಯಧನ ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿAದ ಸಾಲ ಪಡೆಯಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ನಗರ ಕ್ಷೇತ್ರದ ಕ್ಷೇತ್ರದ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯಬಯಸುವವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.03 ಲಕ್ಷಗಳ ಒಳಗಿರಬೇಕು ಹಾಗೂ ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.

ಅರ್ಜಿಯನ್ನು ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶೀ / ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಹೊಂದಾಣಿಕೆಯಾಗಬೇಕು.

ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.ಸರ್ಕಾರದ ವಿವೇಚನಾ ಕೋಟಾ, ನಿಗಮದ ಅಧ್ಯಕ್ಷರು, ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೌಲಭ್ಯ ಪಡೆಯಲು ಅರ್ಹರು.

ಅರ್ಜಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾ.06 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ(ನಿ), ಜಿಲ್ಲಾಡಳಿತ ಭವನ, ಬಿ-ಬ್ಲಾಕ್, 2ನೇ ಮಹಡಿ, ಕೊಠಡಿ ಸಂ.53, ಅನಂತಪುರ ರಸ್ತೆ, ಬಳ್ಳಾರಿ ಅಥವಾ ದೂ.08392-267038 ಗೆ ಸಂಪರ್ಕಿಸಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-29904268, 29904268 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ(ನಿ)ದ ಜಿಲ್ಲಾ ವ್ಯವಸ್ಥಾಪಕ ಭಾವಿಕಟ್ಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular