HomeLatest NewsBIG NEWS: ಹಲವೆಡೆ ಮೋಡಕವಿದ ವಾತಾವರಣ; ಬೆಂಗಳೂರಿನಲ್ಲಿ ಮತ್ತೆ ಮಳೆ ಮುನ್ಸೂಚನೆ

BIG NEWS: ಹಲವೆಡೆ ಮೋಡಕವಿದ ವಾತಾವರಣ; ಬೆಂಗಳೂರಿನಲ್ಲಿ ಮತ್ತೆ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಮೋಡಕವಿದ ವಾತಾವರಣವಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣ ಒಣಹವೆ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ,ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ವಿರಳವಾಗಿರಲಿದೆ.

For Latest News Updates, Join Our Whatsapp Community🚩
RELATED ARTICLES

Most Popular