HomeLatest NewsKarnataka Weather: ಬೆಂಗಳೂರಿನಲ್ಲಿ ಮುಂದುವರೆದ ಮೋಡಕವಿದ ವಾತಾವರಣ, ಮಂಜು; ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Karnataka Weather: ಬೆಂಗಳೂರಿನಲ್ಲಿ ಮುಂದುವರೆದ ಮೋಡಕವಿದ ವಾತಾವರಣ, ಮಂಜು; ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಜು, ಮೋಡಕವಿದ ವಾತಾವರಣ ಮುಂದುವರೆದಿದೆ. ಶೀತ ಗಾಳಿಯ ಅಬ್ಬರವೂ ಜೋರಾಗಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಕಡಿಮೆಯಿದ್ದು, ಒಣಹವೆ ಇರಲಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರೆಯಲಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular