HomeLatest NewsWeather Forecast: ರಾಜ್ಯದಲ್ಲಿ ಶೀತಗಾಳಿ ಜೊತೆಗೆ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Weather Forecast: ರಾಜ್ಯದಲ್ಲಿ ಶೀತಗಾಳಿ ಜೊತೆಗೆ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಶೀತಗಾಳಿ ಹೆಚ್ಚಳವಾಗಿದ್ದು, ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತಾಪಮಾನ ೫ ಡಿಗ್ರಿಗೆ ಇಳಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ದಟ್ತ ಮಂಜು, ಮೈಕೊರೆವ ಚಳಿ ಹೆಚ್ಚಾಕಲಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರುನಲ್ಲಿ ಇಂದು ಬೆಳಿಗ್ಗೆ ಹಾಗೂ ಸಂಜೆ ಚಳಿ ಪ್ರಮಾಣ ಹೆಚ್ಚಾಗಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಕಲಬುರಗಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆ ನೀಡಲಾಗಿದೆ. ಬೀದರ್, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಕನಿಷ್ಠ ತಾಪಮಾನ 5 ಡಿಗ್ರಿಗೆ ಇಳಿಯುವ ಸಾಧ್ಯತೆ ಇದೆ. ಕೆಲ ಭಾಗಗಳಲ್ಲಿ ಕನಿಷ್ಟ ತಾಪಮಾನ 13 ಡಿಗ್ರಿಗೆ ಇಳುವ ಸಾಧ್ಯತೆ ಇದೆ.

ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular