HomeLatest NewsWeather Report: ರಾಜ್ಯದಲ್ಲಿ ಮತ್ತೆ ಶುರುವಾಯ್ತು ಮೈಕೊರೆವ ಚಳಿ: ಬೆಂಗಳೂರಿನಲ್ಲಿ ತುಂತುರು ಮಳೆ

Weather Report: ರಾಜ್ಯದಲ್ಲಿ ಮತ್ತೆ ಶುರುವಾಯ್ತು ಮೈಕೊರೆವ ಚಳಿ: ಬೆಂಗಳೂರಿನಲ್ಲಿ ತುಂತುರು ಮಳೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮೈ ಕೊರೆವ ಚಳಿ ಆರಂಭವಾಗಿದೆ. ಕಳೆದ ಎರಡು ದಿನಗಳಿಂದ ಬಿರುಗಾಳಿ, ಜೊತೆಗೆ ಚಳಿ ಪ್ರಮಾಣ ಹೆಚ್ಚಾಗುತ್ತಿದೆ.

ರಾಜ್ಯದಲ್ಲಿ ಕೆಲ ದಿನಗಳಿಂದ ಒಣ ಹವೆ ವಾತಾವರಣವಿತ್ತು. ಇದೀಗ ಮತ್ತೆ ಕೆಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮೈಕೊರೆವ ಚಳಿ ಪ್ರಮಾಣ ಹೆಚ್ಚಿದ್ದು, ದಟ್ಟವದ ಮೋಡ ಕವಿದ ವಾತಾವರಣ, ಅಲ್ಲಲ್ಲಿ ಮಳೆಯಾಗುತ್ತಿದೆ.

ಬೆಂಗಳೂರಿನ ಹಲವೆಡೆ ನಿನ್ನೆ ರಾತ್ರಿ, ಇಂದು ಬೆಳಿಗ್ಗೆ ತುಂತುರು ಮಳೆಯಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಶೀತಗಾಳಿ, ಮಂಜು ಹಾಗೂ ಮೋಡಕವಿದ ವಾತಾವರಣವಿರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಬಳ್ಳಾರಿ, ಯಾದಗಿರಿ, ಕಲಬುರಗಿ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರೆಯಲಿದೆ.

ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular