HomeLatest NewsBIG NEWS: ರಾಜ್ಯದಲ್ಲಿ ಒಣ ಹವೆ ಆರಂಭ: ನ.17ರಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ

BIG NEWS: ರಾಜ್ಯದಲ್ಲಿ ಒಣ ಹವೆ ಆರಂಭ: ನ.17ರಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣ ಹವೆ ಆರಂಭವಾಗಿದೆ. ಆದರೆ ನವೆಂಬರ್ 17ರಿಂದ ಎರಡು ದಿನಗಳ ಕಾಲ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯಾದ್ಯಂತ ಒಣ ಹವೆ, ಕೊಂಚ ಚಳಿ ಆರಂಭವಾಗಿದ್ದು, ನವೆಂಬರ್ 17ರಿಂದ ಎರಡು ದಿನಗಳ ಕಾಲ ಕರಾವಳಿ ಜಿಲೆಗಳು ಹಗೂ ದಕ್ಷಿಣ ಒಳ ನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರುನಲ್ಲಿ ಮೋಡಕವಿದ ವಾತಾವರಣವಿರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಕಲಬುರಗಿ ಯಾದಗಿರಿ, ವಿಜಯನಗರ, ವಿಜಯಪುರ, ಬೀದರ್, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular