HomeLatest Newsಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಕೊಡಗು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ...

ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಕೊಡಗು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಆಲಿ ಕಲ್ಲು ಮಳೆ; ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ಘೋಷಿಸಲಾಅಗಿದೆ. ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆ ಅಬ್ಬರ ಇರಲಿದೆ.

ಮುಂದಿನ 3 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ ಇರಲಿದೆ. ದಕ್ಷಿಣ ಕನ್ನಡ, ಕೊಡಗು, ಹಾಸನ ಸೇರಿದಂತೆ 4 ಜಿಲ್ಲೆಗಳಲ್ಲಿ ಆಲಿಕಲ್ಲು ಅಮ್ಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಹಾಸನ, ಮಂಡ್ಯ, ಮೈಸೂರು ಮತ್ತು ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣಹವೆಯಿರಲಿದೆ.

ಮೇ 7 ಮತ್ತು 8 ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಇವುಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲೋ ಅಲರ್ಟ್ ಸೂಚಿಸಲಾಗಿದೆ.

ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ. ಈ ಆರು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಲ್ಲಾ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular