HomeLatest Newsಬೆಂಗಳೂರು ಸೇರಿ ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುಂದಿನ 5 ದಿನ ಗುಡುಗು ಸಹಿತ...

ಬೆಂಗಳೂರು ಸೇರಿ ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುಂದಿನ 5 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ.

ಬೆಂಗಳೂರು: ಸುಡುಬಿಸಿಲಿನಿಂದ ಕಂಗೆಟ್ಟಿದ್ದ ಕನ್ನಡಿಗರಿಗೆ ವರುಣದೇವ ತಂಪು ಸುದ್ದಿ ನೀಡಿದ್ದಾನೆ. ರಾಜ್ಯದಲ್ಲಿ ಪ್ರೀ-ಮಾನ್ಸೂನ್ (ಮುಂಗಾರು ಪೂರ್ವ) ಚಟುವಟಿಕೆ ಚುರುಕುಗೊಂಡಿದ್ದು, ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆ ಅಬ್ಬರ? (ಜಿಲ್ಲಾವಾರು ಮಾಹಿತಿ):

ಕರಾವಳಿ ಮತ್ತು ಘಟ್ಟ ಪ್ರದೇಶ: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗಲಿನಲ್ಲಿ ಬಿಸಿಲಿದ್ದರೂ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ. ವಿಶೇಷವಾಗಿ ಬೆಳಗಾವಿ-ಧಾರವಾಡ ಮತ್ತು ಉತ್ತರ ಕನ್ನಡದ ಗಡಿ ಭಾಗಗಳಲ್ಲಿ ಮಳೆ ಅಬ್ಬರಿಸಲಿದೆ.

ಮಲೆನಾಡು: ಹಾಸನದಲ್ಲಿ ಕಳೆದ 32 ಗಂಟೆಗಳಲ್ಲಿ ಗರಿಷ್ಠ 61.5 ಮಿ.ಮೀ ಮಳೆಯಾಗಿ ದಾಖಲೆ ನಿರ್ಮಿಸಿದೆ. ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಸಂಜೆ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿಯ ವೇಳೆ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು: ಸಿಲಿಕಾನ್ ಸಿಟಿಯ ಮೆಜೆಸ್ಟಿಕ್ ಮತ್ತು ಕಾರ್ಪೊರೇಷನ್ ಭಾಗದಲ್ಲಿ ಈಗಾಗಲೇ ಮಳೆಯಾಗಿದ್ದು, ಮುಂದಿನ 4 ದಿನಗಳ ಕಾಲ ನಗರದಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ.

ಏಪ್ರಿಲ್ 30 (ಇಂದು): 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್. ಬೀದರ್, ಬೆಳಗಾವಿ, ಬಾಗಲಕೋಟೆ ಮತ್ತು ಕರಾವಳಿ ಭಾಗದಲ್ಲಿ ಸಾಧಾರಣ ಮಳೆ.

ಮೇ 01: ರಾಯಚೂರು, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಸೇರಿದಂತೆ 19 ಜಿಲ್ಲೆಗಳಲ್ಲಿ ವರುಣನ ಸಿಂಚನ.

ಗುಡುಗು-ಮಿಂಚಿನ ಸಂದರ್ಭದಲ್ಲಿ ಜಮೀನು ಅಥವಾ ತೋಟಗಳಲ್ಲಿ ಬಯಲು ಪ್ರದೇಶದಲ್ಲಿ ಇರಬೇಡಿ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ನಗರವಾಸಿಗಳಿಗೆ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಜಾಗರೂಕರಾಗಿರಿ.

ಎಲ್ಲೆಲ್ಲಿ ಬಿಸಿಲಿನ ಅಬ್ಬರ?

ಉತ್ತರ ಕರ್ನಾಟಕ: ಕಲಬುರಗಿ ಮತ್ತು ಬೀದರ್‌ನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಬಿಸಿ ಗಾಳಿಯ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡು: ಮೈಸೂರು, ಮಂಡ್ಯ, ತುಮಕೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಲಿದೆ.

ಕರಾವಳಿ: ಮಂಗಳೂರು, ಉಡುಪಿಯಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ ಸೆಕೆ ಜನರನ್ನು ಹೈರಾಣಾಗಿಸಲಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular