HomeKarnatakaಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2026-27 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ ಮತ್ತು ನವೀಕರಣ), ಸ್ವಾವಲಂಬಿ ಸಾರಥಿ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ,ಹಟ್ಟಿಗೊಲ್ಲ, ಮರಾಠ, ಈಡಿಗ, ತಿಗಳ, ಕುಂಬಾರ, ಹಡಪದ, ಗಾಣಿಗ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

 ಈ ಮೇಲಿನ ಎಲ್ಲಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು ಮತ್ತು ಇತರೆ ದಾಖಾಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದೂ ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. 2024-25 ಮತ್ತು 2025-26 ನೇ ಸಾಲಿನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯಲಿಂಗಿಗಳಿಗೆ 1% ಮೀಸಲಾತಿ ಇರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಸೆ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.ಸಂ.:080-22374832/833 ಹಾಗೂ ವೆಬ್ ಸೈಟ್ www.kaad.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ ಶಿವಮೊಗ್ಗ. ಕಛೇರಿ ದೂ.ಸಂ. 08182-229634ನ್ನು ಸಂಪರ್ಕಿಸುವುದು

 ಉಪ್ಪಾರ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2026-27 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ ಮತ್ತು ನವೀಕರಣ), ವಿದೇಶಿ ವ್ಯಾಸಂಗ ಸಾಲ ಯೋಜನೆ (ನೂತನ ಮತ್ತು ನವೀಕರಣ), ಸ್ವಾವಲಂಬಿ ಸಾರಥಿ ಯೋಜನೆ, ಶ್ರೀ ಭಗೀರಥಾ ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಅಲೆಮಾರಿ/ಅರೆಅಲೆಮಾರಿ, ಅಂಬಿಗ, ಮಡಿವಾಳ, ಸವಿತಾ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ,ಹಟ್ಟಿಗೊಲ್ಲ, ಮರಾಠ, ಈಡಿಗ, ತಿಗಳ, ಕುಂಬಾರ, ಹಡಪದ, ಗಾಣಿಗ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

 ಈ ಮೇಲಿನ ಎಲ್ಲಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು ಮತ್ತು ಇತರೆ ದಾಖಾಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದೂ ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. 2024-25 ಮತ್ತು 2025-26 ನೇ ಸಾಲಿನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯಲಿಂಗಿಗಳಿಗೆ 1% ಮೀಸಲಾತಿ ಇರಿಸಲಾಗಿದೆ.

 ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಸೆ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ದೂ.ಸಂ.:080-22252555 ಹಾಗೂ ವೆಬ್ ಸೈಟ್ www.upparadevelopment.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ ಶಿವಮೊಗ್ಗ. ಕಛೇರಿ ದೂ.ಸಂ. 08182-229634ನ್ನು ಸಂಪರ್ಕಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular