HomeLatest NewsBREAKING: ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: ಬೆಂಗಳೂರಿನಲ್ಲಿ ಗುಡುಗು ಸಹಿತ ಜಿಟಿಜಿಟಿ ಮಳೆ

BREAKING: ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ: ಬೆಂಗಳೂರಿನಲ್ಲಿ ಗುಡುಗು ಸಹಿತ ಜಿಟಿಜಿಟಿ ಮಳೆ

ಬೆಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತ ಜಿಟಿಜಿಟಿ ಮಳೆಯಾಗುತ್ತಿದ್ದರೆ, ಅತ್ತ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ.

ಕಳೆದ ಕೆಲ ದಿನಗಳಿಂದ ಹೆಚ್ಚುತ್ತಿದ್ದ ತಾಪಮಾನ, ಬಿಸಿಲ ಝಳಕ್ಕೆ ಕಾದ ಕಾವಲಿಯಂತಾಗಿದ್ದ ಬೆಂಗಳೂರಿಗೆ ವರುಣದೇವ ತಂಪೆರೆದಿದ್ದಾನೆ. ರಣ ಬಿಸಿಲ ಹೊಡೆತಕ್ಕೆ ತತ್ತರಿಸಿದ್ದ ಜನತೆಗೆ ಕೊಂಚ ಮಳೆಯ ಸಿಂಚನವಾಗಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ.

ಬೆಂಗಳೂರಿನಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ವರುಣಾರ್ಭಟ ಜೋರಾಗುವ ನಿರೀಕ್ಷೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗುತ್ತಿದೆ. ಬ್ಸಿಲ ಝಳಕ್ಕೆ ಕಂಗಾಲಾಗಿದ್ದ ಜನರಿಗೆ ತಂಪೆರೆದಂತಾಗಿದೆ. ಶಿವಬಸವ ನಗರ, ನೆಹರು ನಗರ, ಎಸ್ ಪಿ ಕಚೇರಿ ಸುತ್ತಮುತ್ತ ಆಲಿಕಲ್ಲು ಮಳೆಯಾಗುತ್ತಿದ್ದು, ಎಸ್ ಪಿ ಕಚೇರಿ ಬಳಿ ಆಲಿಕಲ್ಲು ರಾಶಿಹಾಕಿದಂತೆ ಬಿದ್ದಿದೆ.

ಮತ್ತೊಂದೆಡೆ ಮೀನುಗಾರಿಕಾ ಉಪನಿರ್ದೇಶಕರ ಕಚೇರಿಗೆ ಚರಂಡಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಸುರಿದ ಭಾರಿ ಆಲಿಕಲ್ಲು ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular