ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಕೆಲವೇ ಕ್ಷಣಗಳಲ್ಲಿ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಭಾಷಣ ಆರಂಭವಾಗಲಿದೆ.
ಬಜೆಟ್ ಪ್ರತಿ ಇರುವ ಕೆಂಪು ಸೂಟ್ ಕೇಸ್ ನೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿದರು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಬಜೆಟ್ಗೆ ಅನುಮೋದನೆ ಸಿಕ್ಕಿದೆ.
ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಬಹುನಿರೀಕ್ಷಿತ ರಾಜ್ಯ ಬಜೆಟ್-2026-27 ಮಂಡಿಸಲಿದ್ದಾರೆ. ಇಂದಿನಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದ್ದು, ಈ ಬಾರಿಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಿವೆ.

