HomeKarnatakaBREAKING: ದಾವಣಗೆರೆ ಉಪಚುನಾವಣೆ: ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆ; ಸಮರ್ಥ ಶಾಮನೂರು...

BREAKING: ದಾವಣಗೆರೆ ಉಪಚುನಾವಣೆ: ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆ; ಸಮರ್ಥ ಶಾಮನೂರು ಹಿನ್ನಡೆ

ದಾವಣಗೆರೆ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಜೊತೆಗೆ ಇಂದು ಕರ್ನಾಟಕದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಕೂಡ ಪ್ರಕಟವಾಗುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿಯೂ ಮತ ಎಣಿಕೆ ಬಿರುಸಿನಿಂದ ಸಾಗಿದೆ.

ಎರಡೂ ಕ್ಷೇತ್ರಗಳಲ್ಲಿಯೂ ಟ್ರೆಂಡ್ ಕ್ಷಣ ಕ್ಷಣಕ್ಕೂ ಬದಲಾಗುತ್ತಿದೆ. ಬೆಣ್ಣೆನಗರಿ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ನಡುವೆ ಹಾಅವು ಏಣಿ ಆಟ ಆರಂಭವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ದಾವಣಗೆರೆಯಲ್ಲಿ ಕಾಂಗ್ರೆಸ್ ನ ಸಮರ್ಥ ಶಾಮನೂರು ಆರಂಭಿಕ ಮುನ್ನಡೆಗಳಿಸಿದ್ದರೂ ಸದ್ಯದ ಮಾಹಿತಿ ಪ್ರಕಾರ ಹಿನ್ನಡೆಯಲ್ಲಿದ್ದಾರೆ. ದಾವಣಗೆರೆಯಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಗಿದ್ದು, ಮೊದಲ ಸುತ್ತಿನಲ್ಲಿ ಸಮರ್ಥ ಶಾಮನೂರು ಹಿನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆ ಪಡೆದಿದ್ದಾರೆ.

ಇನ್ನು ಸದ್ಯದ ಟ್ರೆಂಡ್ ಪ್ರಕಾರ ಬಾಗಲಕೋಟೆಯಲ್ಲಿ ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚಿರಂತಿಮಠ ಹಿನ್ನಡೆಯಲ್ಲಿದ್ದಾರೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 8,623 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular