HomeKarnatakaರಾಜ್ಯದಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ: ನಾಲ್ಕು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ: ನಾಲ್ಕು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ರಾಜಧಾನಿ ಬೆಂಗಳುರಿನಲ್ಲಿ ಬಿಸಿಲ ಧಗೆ ಜನರನ್ನು ಹೈರಾಣಾಗಿಸುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಂತೂ ಭೂಮಿ ಕಾದ ಕಾವಲಿಯಂತಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿಯಿಂದಾಗಿ ಜನರುತತ್ತರಿಸಿ ಹೋಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ. 45 ಡಿಗ್ರಿ ಸೆಲ್ಸಿಯಸ್​ಗೆ ತಲುಪುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಈ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು,ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಹೀಟ್​ ವೇವ್ ಅಲರ್ಟ್​ ಘೋಷಿಸಲಾಗಿದೆ. ಅಲ್ಲಲ್ಲಿ ಗುಡುಗು ಮಳೆ ಸಂಭವವಿದೆ ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular