HomeKarnatakaWeather Report: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ತಾಪಮಾನ: ರಣ ಬಿಸಿಲ ನಡುವೆ ಈ ಜಿಲ್ಲೆಗಳಲ್ಲಿ ಆಲಿಕಲ್ಲು...

Weather Report: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ತಾಪಮಾನ: ರಣ ಬಿಸಿಲ ನಡುವೆ ಈ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವ್ ಜಿಲ್ಲೆಗಳಲ್ಲಿ ರಣ ಬಿಸಿಲ ಅಬ್ಬರಕ್ಕೆ ಜನರು ಹೈರಾಣಾಗಿದ್ದಾರೆ. ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಳವಾಗಲಿದೆ ಹೀಟ್ ವೇವ್ ಬಗ್ಗೆ ಎಚ್ಚರವಿರಲಿ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳು, ಕಲ್ಯಾಣ ಕರ್ನಾಟಕ ಭಾಗ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇನ್ನೆರಡು ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಆರೋಗ್ಯದ ಬಗ್ಗೆ ಗಮನವಿರಲಿ ಎಂದು ಸೂಚಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣ ಅಲೆ ಮುಂದುವರೆಯಲಿದ್ದು, ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ ಮತ್ತು ವಿಜಯಪುರದಲ್ಲಿ ಬಿಸಿಲ ನಡುವೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ 5 ದಿನಗಳವರೆಗೆ ಅಂದರೆ ಏಪ್ರಿಲ್ 22ರವರೆಗೆ ಕರಾವಳಿ ಪ್ರದೇಶಗಳಲ್ಲಿ ಉಷ್ಣ ಅಲೆ ಇರಲಿದ್ದು, ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ. ಕರ್ನಾಟಕದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular