HomeKarnatakaಕರಾವಳಿ ಜಿಲ್ಲೆಗಳಲ್ಲಿ ಹೀಟ್ ವೇವ್: ಅನಗತ್ಯವಾಗಿ ಮನೆಯಿಂದ ಹೊರಹೋಗದಂತೆ ಎಚ್ಚರಿಕೆ: ಮುಂಜಾಗೃತಾ ಕ್ರಮ ಕೈಗೊಳ್ಳಲು ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಹೀಟ್ ವೇವ್: ಅನಗತ್ಯವಾಗಿ ಮನೆಯಿಂದ ಹೊರಹೋಗದಂತೆ ಎಚ್ಚರಿಕೆ: ಮುಂಜಾಗೃತಾ ಕ್ರಮ ಕೈಗೊಳ್ಳಲು ಸೂಚನೆ

ಬೆಂಗಳೂರು: ರಾಜ್ಯದ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದತೆ ಉಳಿದ ಜಿಲ್ಲೆಗಳಲ್ಲಿ ರಣ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದೆ. ಅತ್ತ ಕರಾವಳಿ ಜಿಲ್ಲೆಗಳಲ್ಲಿಯೂ ತಾಪಮಾನ ಹೆಚ್ಚಳವಾಗಿದ್ದು, ಉಷ್ಣ ಅಲೆ ಆರಂಭವಾಗಿದೆ. ಮತ್ತೊಂದೆಡೆ ಉತ್ತರ ಕರ್ನಾಟಕ ಭಾಅಗಗಳಲ್ಲಿ ಬಿಸಿಲ ಜಳಕ್ಕೆ ಜನರು ಕಂಗೆಟ್ಟುಹೋಗಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಅಥವಾ ಹೀಟ್ ವೇವ್ ಇಂದೂ ಕೂಡ ಇರಲಿದ್ದು, ಮುನ್ನೆಚ್ಚರಿಕ ಅಕ್ರಮ ವಹಿಸುವಂತೆ ಹವಾಮಾನ ಇಲಕಹೆ ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿದ್ದು, ಸೆಖೆಯ ವಾತಾವರಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಹುತೇಕ ರಾಜ್ಯದಾದ್ಯಂತ ಉಷ್ಣ ಅಲೆ ಆವರಿಸಿದೆ. ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕರಾವಳಿಯಲ್ಲಿ ಬಿಸಿಲ ಧಗೆ ಆರಂಭವಾಗಿದೆ. ಉತ್ತರ ಕನ್ನಡದಲ್ಲಿ ಇಂದಿನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇದ್ದು, ಇದು 42 ಡಿಗ್ರಿಗೂ ಏರಿಕೆಯಾಗಬಹುದು. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಿನ ತಾಪಮಾನ ದಾಖಲಾಗಿದ್ದು, ಈ ನಡುವೆ ಸಾಧಾರಣ ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಬೆಳಗಾವಿ, ಬೀದರ್, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅನಗತ್ಯವಾಗಿ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular