HomeKarnatakaಬಿಸಿಲ ಝಳ ಹೆಚ್ಚಳ: ರಾಜ್ಯದ ಈ ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ: ಕೆಲ ಜಿಲ್ಲೆಗಳಲ್ಲಿ ಮಳೆ...

ಬಿಸಿಲ ಝಳ ಹೆಚ್ಚಳ: ರಾಜ್ಯದ ಈ ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ: ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಉರಿ ಬಿಸಿಲಿಗೆ ಜನರು ಹೈರಾಣಾಗುತ್ತಿದ್ದಾರೆ. ರಾಜ್ಯದಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ವಾಡಿಕೆಗಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇಂದು ಕೂಡ ಬಿಸಿಲಿನ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 21°C ದಾಖಲಾಗುವ ಸಾಧ್ಯತೆ ಇದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಹೆಚ್ಚಿರಲಿದೆ.

ಕಲಬುರಗಿ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಲು ಕಡು ತೀವ್ರವಾಗಿರಲಿದ್ದು, ತಾಪಮಾನವು 38°C ರಿಂದ 40°C ಗಡಿ ತಲುಪುವ ಸಾಧ್ಯತೆ ಇದೆ. ಹೀಗಾಗಿ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಹವಾಮಾನವು ಆರ್ದ್ರತೆಯಿಂದ ಕೂಡಿದ್ದು ಸೆಖೆ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ.

ಹುಬ್ಬಳ್ಳಿ, ಬೆಳಗಾವಿ ಮತ್ತು ಉಡುಪಿ ನಗರಗಳಲ್ಲಿ ಮುಂದಿನ 3 ದಿನಗಳ ಕಾಲ ವಾತಾವರಣದಲ್ಲಿ ತುಂಬಾ ಬದಲಾವಣೆಗಳು ಆಗಲಿದೆ. ಅತಿ ಹೆಚ್ಚು ಬಿಸಿಲು ಇರಲಿದೆ. ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಏರಿಕೆಯಾಗಲಿದ್ದು, ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸಿ ಎಂದು ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular