HomeKarnatakaRAIN ALERT: ಭಾರಿ ಮಳೆ ಮುನ್ಸೂಚನೆ: ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ಭಾರಿ ಮಳೆ ಮುನ್ಸೂಚನೆ: ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಸಂಜೆಯಾಗುತ್ತಿದ್ದಂತೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು. ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಹೆಚ್ಚಲಿದ್ದು. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಿರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಗಾಳಿ ಸಹಿತ ಜಿಟಿಜಿಟಿ ಮಳೆಯಾಗಬಹುದು.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಹಗುರವಾದ ಮಳೆಯಾಗಲಿದೆ.

ಉತ್ತರ ಒಳನಾಡಿನ ಹಾವೇರಿ, ಗದಗ, ಕೊಪ್ಪಳ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಹಗುರ ಮಳೆಯಾಗುವ ಮುನ್ಸೂಚನೆ ಇದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular