HomeKarnatakaRain Alert: ಮುಂದುವರೆದ ಮಳೆ ಅಬ್ಬರ: 7 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

Rain Alert: ಮುಂದುವರೆದ ಮಳೆ ಅಬ್ಬರ: 7 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆಯ ಅಬ್ಬರ ಜೊರಾಗಿದ್ದು, ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಭಾಅರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಎಚ್ಚರಿಕೆ ಸಂದೇಶದಲ್ಲೂ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.

ನಾಳೆ ಆಗಸ್ಟ್ 6ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ.

ಬೀದರ್, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular