HomeKarnatakaRain Alert: ಭಾರಿ ಮಳೆ ಮುನ್ಸೂಚನೆ: ರಾಜ್ಯದಲ್ಲಿ ಅಲರ್ಟ್ ಘೋಷಣೆ

Rain Alert: ಭಾರಿ ಮಳೆ ಮುನ್ಸೂಚನೆ: ರಾಜ್ಯದಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುಂದಿನ ಮೂರು ನಾಲ್ಕು ದಿನಗಳ ಕಾಲ ಬಿರಿಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗಲಿದ್ದು, ರಾಜ್ಯದೆಲ್ಲೆಡೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುನ್ಸೂಚನೆ ಪ್ರಕಾರ ಮುಂದಿನ 3 ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿಗೆ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 18 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ 64.5mm ನಿಂದ 115.5mm ವರೆಗೆ ಮಳೆ ದಾಖಲಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗಲಿದೆ. ಇಂದು ಮತ್ತು ನಾಳೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳ್ಲಲಿ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಈ ವರ್ಷ ನೈಋತ್ಯ ಮುಂಗಾರು ಅವಧಿಗೂ ಮುನ್ನವೇ ಕೇರಳಂ ರಾಜ್ಯ ಪ್ರವೇಶಿಸಲಿದೆ. ಅಂದರೆ ಮೇ 26 ರಂದು ಮುಂಗಾರು ಕೇರಳಂಗೆ ಅಪ್ಪಳಿಸಲಿದೆ. ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪಿರುವ ಮುಂಗಾರು, ಅಲ್ಲಿಂದ ವೇಗವಾಗಿ ಭಾರತದ ಪ್ರಧಾನ ಭೂಭಾಗದತ್ತ ಮುನ್ನಡೆಯುತ್ತಿದೆ. ಕೇರಳಂಗೆ ಮುಂಗಾರು ಪ್ರವೇಶಿಸಿದ ಒಂದು ವಾರದಲ್ಲಿ, ಅಂದರೆ ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಮಳೆ ಆಗಮನವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular