HomeLatest NewsRain Alert: ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ದಕ್ಷಿಣ ಕನ್ನಡದಲ್ಲಿ...

Rain Alert: ಭಾರಿ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ದಕ್ಷಿಣ ಕನ್ನಡದಲ್ಲಿ ಶಾಲಾ-ಕಾಲೇಜಿಗೆ ರಜೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾಲ್ಲಿ ಮುಂಗಾರು ಮಳೆ ಅಬ್ಬರ ಮತ್ತಷ್ಟು ಜೋರಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹಾವಾಮಾನ ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ, ಇಂದು ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ.

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ದಿನವಿಡೀ ತಂಪಾದ ಗಾಳಿ ಹಾಗೂ ಸಾಧಾರಣ ಅಥವಾ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಲೆನಾಡಿನ ಘಟ್ಟ ಪ್ರದೇಶಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಮುಂಗಾರು ಮಳೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಸರ್ಕಾರದ ಆದೇಶ ಮೀರಿ ತರಗತಿ ನಡೆಸಲು ಮುಂದಾದ ಖಾಸಗಿ ಸಂಸ್ಥೆಗಳಿಗೆ ಜಿಲ್ಲಾಡಳಿತ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡದ ಕರಾವಳಿ ತೀರದಲ್ಲಿ ಅರಬ್ಬಿ ಸಮುದ್ರದ ಅಲೆಗಳ ಆರ್ಭಟ ರಣಭೀಕರವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಗುಡುಗು, ಸಿಡಿಲು ಸಹಿತ ಗಂಟೆಗೆ ಭಾರಿ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ನದಿ ತೀರ ಹಾಗೂ ಕಡಲ ತೀರದ ನಿವಾಸಿಗಳು ತಕ್ಷಣವೇ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಲ್ಲೇ ಉಳಿಯುವಂತೆ ಜಿಲ್ಲಾಡಳಿತಗಳು ಕರಪತ್ರ ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸುತ್ತಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular