HomeKarnatakaRAIN ALERT: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್...

RAIN ALERT: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನ ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ವರುಣಾರ್ಭಟ ಹೆಚ್ಚಲಿದ್ದು, ಸಾರ್ವಜನಿಕರು ಮುನೆಚ್ಚರಿಕೆ ವಹಿಸುವಂತೆ ಹಾಗೂ ಅಧಿಕಾರಿಗಳು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗಲಿದೆ. ರಸ್ತೆಗಳಲ್ಲಿ ಸಾಗುವ ವಾಹನ ಸವಾರರು ಹಾಗೂ ನದಿ ತೀರದ ನಿವಾಸಿಗಳು ಜಾಗರೂಕರಾಗಿರಲು ಜಿಲ್ಲಾಡಳಿತ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ದಟ್ಟವಾದ ಮೋಡಕವಿದ ವಾತಾವರಣವಿದ್ದು, ಬೆಳಗ್ಗೆ ಮತ್ತು ಸಂಜೆ ವೇಳೆ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಹಗುರವಾದ ಮಳೆಯ ಸಿಂಚನವಾಗಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಮಲೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular