HomeKarnatakaRain Alert: ಮತ್ತೆ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

Rain Alert: ಮತ್ತೆ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಕೆಲವೆಡೆ ಕಳೆದ ಕೆಲವು ದಿನಗಳಿಂದ ಮಳೆ ಜೋರಾಗಿದ್ದರೂ ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆ ಅಬ್ಬರ ಕೊಂಚ ಕಡಿಮೆಯಾಗಿತ್ತು. ಇದೀಗ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮತ್ತೆ ವರುಣಾರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವೆಡೆ ವ್ಯಾಪಕವಾಗಿ ಮಳೆಯಾಗಲಿದೆ. ಈ ಭಾಗದಲ್ಲಿಯೂ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಲಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಧಾರವಾಡ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳ ಹಲವು ಕಡೆ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೊಡಗು, ಹಾಸನ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನಾಳೆ ಆಗಸ್ಟ್ 8ರಂದು ಕೂಡ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular