HomeKarnatakaಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲೆಗಳಲ್ಲಿ ಮತ್ತೆ ವರುಣರಭಟ ಜೋರಾಗಲಿದೆ. ಇಂದು ಮತ್ತು ನಾಳೆ ಜುಲೈ 29ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ ನೀಡಲಾಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಹ ಒಂದು ಅಥವಾ ಎರಡು ಕಡೆ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ಜುಲೈ 29ರಂದೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ.

ಬೆಳಗಾವಿ, ಧಾರವಾಡ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಾಳಿ ಬೀಸಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular