HomeLatest Newsಮುಂದಿನ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡಿನಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್...

ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಒಳನಾಡಿನಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರಿನಲ್ಲಿ ಭಾರಿ ಮಳೆಯಾಗಲಿದೆ. ಈ ಭಾಗದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಹವಾಮಾನ ಇಲಾಖೆಯು ಈ ನಾಲ್ಕೂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರು ತುಸು ನಿಧಾನವಾಗಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular