HomeKarnatakaWeather Report: ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

Weather Report: ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ: 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದರೆ ಇನ್ನು ಕೆಲ ಜಿಲ್ಲೆಗಳಲ್ಲಿ ಬಿಸಿಲ ಝಳ, ಸೆಕೆ ಹೆಚ್ಚುತ್ತಿದೆ. ಇಂದು ಕೂಡ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಲವೆಡೆ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ಕಲಬುರ್ಗಿ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಒಳನಾಡು ಭಾಗದ ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಬಳ್ಳಾರಿ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular