HomeKarnatakaWeather Report: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ: ಹಲವು ಜಿಲ್ಲೆಗಳಲ್ಲಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

Weather Report: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ: ಹಲವು ಜಿಲ್ಲೆಗಳಲ್ಲಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿಗಳಿಂದ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದೂ ಕೂಡ ಹಲವೆಡೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣಹವೆಯಿರಲಿದ್ದು, ಬೆಂಗಳೂರಿನಲ್ಲಿ ಇಂದೂ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ವೇಳೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ತುಮಕೂರು ಮತ್ತು ವಿಜಯನಗರದಲ್ಲಿ ಬಿರುಗಾಳಿ ಮಳೆ ಸಾಧ್ಯತೆ ಇದ್ದು, ಗಾಳಿ ಗಂಟೆಗೆ 30-40 ಕೀ.ಮಿ ವೇಗದಲ್ಲಿ ಬೀಸಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular