HomeKarnatakaಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ತಂಪೆರೆದ ಮಳೆರಾಯ: ಬೀದರ್, ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ...

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ತಂಪೆರೆದ ಮಳೆರಾಯ: ಬೀದರ್, ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ರಣ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳಕ್ಕೆ ಜನರು ಹೈರಾಣಾಗುತ್ತಿದ್ದಾರೆ. ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಬಿಸಿಲಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ಕೊಚ ತಂಪೆದಿದ್ದಾನೆ.

ರಾಜ್ಯದ ಹಲವೆಡೆ ಭಾನುವಾರ ಮಳೆಯಾಗಿದ್ದು, ಜನರಿಗೆ ಕೊಂಚ ನಿಟ್ಟುಸಿರುಬಿಡುವಂತಾಯಿತು. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆಯಾಗಿದೆ.

ಚಿಕ್ಕಮಗಳೂರಿನಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಶೃಂಗೇರಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಮೂಡಿಗೆರೆ ಮತ್ತು ಎನ್.ಆರ್.ಪುರ ತಾಲೂಕುಗಳ ಹಲವೆಡೆ ಆಲಿಕಲ್ಲು ಮಳೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ನಗರದ ಸದಾಶಿವನಗರ ಮತ್ತು ಶಾಹುನಗರದಲ್ಲಿ ಭಾರೀ ಮಳೆಯಾಗಿದೆ. ಬೀದರ್‌ನ ಔರಾದ್, ಕಮಲನಗರ, ಭಾಲ್ಕಿ, ಚಿಟಗುಪ್ಪ, ಬಸವಕಲ್ಯಾಣ, ಹುಲಸೂರು ಸೇರಿದಂತೆ ಹಲವೆಡೆ ಉತ್ತಮ ಮಳೆ ಸುರಿದಿದೆ.

ಇನ್ನು ಇಂದೂ ಕೂಡ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆಯಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಾಮರಾಜನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರೆಯಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳುರಿನಲ್ಲಿ ತಾಪಮಾನ ಇನ್ನಷ್ಟು ಹೆಚ್ಚಲಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಬಿಸಿಲ ಝಳ ಇರುವುದರಿಂದ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಮನೆಯಿಂದ ಅಥವಾ ಕಚೇರಿಗಳಿಂದ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular