ಬೆಂಗಳೂರು: ಮಳೆ ಕೊರತೆಯಿಂದಾಗಿ ಕರ್ನಾಟಕದಲ್ಲಿ ಮುಂಗಾರು ಕುಂಠಿತಗೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆ ಹವಾಮಾಅನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ.
ಹಿಂಗಾರು ಮಳೆ ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ಛತ್ತೀಸ್ಗಢದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಎಫೆಕ್ಟ್ ಮಹಾರಾಷ್ಟ್ರಕ್ಕೂ ತಟ್ಟಲಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಕರಾವಳಿ, ಉಡುಪಿ, ಚಿಕ್ಕ ಮಗಳೂರು ಭಾಗದಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಕೊಡುಗು, ಮೈಸೂರು ಭಾಗದಲ್ಲಿ ಸಾದಾರಣ ಮಳೆಯಾಗಲಿದೆ. ಇನ್ನು ಫೆಸಿಪಿಕ್ ಸಾಗರದಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಹಿಂಗಾರು ಮಳೆ ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಗಂಟೆಗೆ 50-60 ಕಿಲೋ ಮೀಟರ್ ವೇಗದ ಗಾಳಿಯ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿಯೂ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

