ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಧಾರಾಕಾರ ಮಳೆಯಾಗಲಿದ್ದು, ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಆರೇಂಜ್ ಅಲರ್ಟ್ ಹಾಗೂ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಮೇ 22 ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಮೇ 23ರಂದು ಬೀದರ್ ಹಾಗೂ ಕಲಬುರಗಿ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

