ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು,. ಜನರು ಬಿಸಿಲ ಬೇಗೆಗೆ ಹೈರಾಣಾಗುತ್ತಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಸುಡುಬಿಸಿಲು ಜನರನ್ನು ಇನ್ನಿಲ್ಲದಂತೆ ಸುಸ್ತಾಗಿಸುತ್ತಿದೆ. ಹೀಟ್ ವೇವ್ ಆರಂಭವಾಗಿದ್ದು, ಜನ ಜೀವನ ಸಂಕಷ್ಟಕ್ಕೀಡಾಗಿದೆ. ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದಲ್ಲಿ ಇಂದು ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ತಿಳಿಸಿದೆಇದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸೆಖೆಯ ಪ್ರಮಾಣ ಹೆಚ್ಚಿರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಹಗುರ ಮಳೆಯ ಮುನ್ಸೂಚನೆ ಇದೆ.
ಪ್ರಮುಖ ಜಿಲ್ಲೆಗಳ ಅಂದಾಜು ತಾಪಮಾನ (ಗರಿಷ್ಠ/ಕನಿಷ್ಠ):
ಜಿಲ್ಲೆ ಗರಿಷ್ಠ ತಾಪಮಾನ ಕನಿಷ್ಠ ತಾಪಮಾನ
ಬೆಂಗಳೂರು 36°C 22°C
ಕಲಬುರಗಿ 42°C 26°C
ಮಂಗಳೂರು 34°C 25°C
ಶಿವಮೊಗ್ಗ 37°C 23°C
ಹುಬ್ಬಳ್ಳಿ-ಧಾರವಾಡ 39°C 24°C
ಕಲಬುರಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನವು 40°C ದಾಟುವ ಸಾಧ್ಯತೆಯಿದ್ದು, ಜನರಿಗೆ ಬಿಸಿಲಿನಿಂದ ಜಾಗರೂಕರಾಗಿರಲು ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತತ್ರ ಕನ್ನಡ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದ ಜೊತೆಗೆ ತೇವಾಂಶ ಭರಿತ ಹವಾಮಾನ ಇರಲಿದ್ದು, ಉಷ್ಣಾಂಶದ ಅನುಭವ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

