HomeKarnatakaWeather Report: ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆ ತಾಪಮಾನ

Weather Report: ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆ ತಾಪಮಾನ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲ ಧಗೆ ಜನರನ್ನು ಹೈರಾಣಾಗಿಸುತ್ತಿದೆ. ಈ ನಡುವೆ ಐದು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಬೀದರ್, ಕಲಬುರ್ಗಿ, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಅಬ್ಬರಿಸಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ , ಉಡುಪಿ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣ ಹವೆ ಮುಂದುವರಿಯಲಿದೆ.

ಮೈಸೂರು, ಕೊಡಗು, ಚಾಮರಾಜನಗರ, ಕೋಲಾರ, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆ ಇರಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular