BIG NEWS : ಕರ್ನಾಟಕದ ತೊಗಲುಗೊಂಬೆ ಕಲಾವಿದೆ ಭೀಮವ್ವಗೆ ರಾಷ್ಟ್ರಪತಿಗಳಿಂದ ‘ಪದ್ಮಶ್ರೀ ಪ್ರಶಸ್ತಿ’ ಪ್ರದಾನ.!

ಡಿಜಿಟಲ್ ಡೆಸ್ಕ್ : ಕರ್ನಾಟಕದ ತೊಗಲುಗೊಂಬೆ ಕಲಾವಿದೆ ಭೀಮವ್ವಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಹಲವರ ಸಮ್ಮುಖದಲ್ಲಿ ಪ್ರಶಸ್ತಿ ನೀಡಲಾಯಿತು.

ಬಾಲ್ಯದಿಂದಲೇ ಈ ಕಲೆಯಲ್ಲಿ ತೊಡಗಿಸಿಕೊಂಡಿರುವ ಭೀಮವ್ವ ಅವರು ದೇಶ-ವಿದೇಶಗಳಲ್ಲಿ ಈ ಕಲೆಯನ್ನು ಪ್ರದರ್ಶಿಸಿ ಪ್ರಶಂಸೆ ಪಡೆದಿದ್ದಾರೆ. ಕೊಪ್ಪಳದ ಇರಕಲ್ಲಗಡಾದ ಹನುಮಟ್ಟಿಯ ಸಂಜೀವಪ್ಪ ಹೊಳೆಯಮ್ಮರ ಮಗಳಾದ ಭೀಮವ್ವ, ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದಲ್ಲಿ 1929 ರಲ್ಲಿ ಜನಿಸಿದ್ದರು. ತಮ್ಮ 14ನೇ ವಯಸ್ಸಿನಿಂದ (103 ವರ್ಷ) ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನ ಕುಲ ಕಸುಬಾಗಿ ಮಾಡುತ್ತಾ ಬಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read