ಬೆಂಗಳೂರು : ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಬಗ್ಗೆ ಬಹಳ ಕುತೂಹಲ ಮೂಡಿದೆ. ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಲವು ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ.
ಇಂದು ಸಿದ್ದರಾಮಯ್ಯ 17ನೇ ದಾಖಲೆಯ ಬಜೆಟ್ ಮಂಡನೆ ಹಿನ್ನೆಲೆ, ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಇರಲಿದೆ. ರಾಜ್ಯದ ಆಯ್ದ 230 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಮಾಡಲಾಗುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಬೆಂಗಳೂರಿನ 6 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ವೀಕ್ಷಿಸಬಹುದು.

